ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಗಾಲ್ಫ್ ಕ್ರೀಡೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತದ ಗಾಲ್ಫರ್ ಆದಿತಿ ಅಶೋಕ್ ಸಾಧನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘನೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅದಿತಿ ಕರ್ನಾಟಕದವರು. ಬೆಂಗಳೂರಿನ ವರು ಎಂಬುದು ನಮಗೆ ಹೆಮ್ಮೆಯ ಸಂಗತಿ ಎಂದರು. ಅದಿತಿ ಅವರಿಗೆ ಉಜ್ವಲ ಭವಿಷ್ಯವಿದೆ. ಕಾಮನ್ ವೆಲ್ತ್ ಸೇರಿದಂತೆ ಮುಂಬರುವ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಲು, ಪದಕಗಳನ್ನು ಗೆಲ್ಲಲು ಅವಕಾಶವಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.ಇನ್ನು ಅದಿತಿ ಅವರು ಇಂದು ಪದಕ ಗೆಲ್ಲದೇ ಇರಬಹುದು. ಆದರೆ ಅವರು ಅಂತಾರಾಷ್ಟ್ರೀಯ ಗುಣಮಟ್ಟದ ಆಟವನ್ನು ಪ್ರದರ್ಶನ ಮಾಡಿದ್ದಾರೆ. ಅದಿತಿಗೆ ಉಜ್ವಲ ಭವಿಷ್ಯ ಇದೆ. ಇಡೀ ನಾಡಿನ ಜನತೆ ಅವರೊಂದಿಗೆ ಇದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.
PublicNext
08/08/2021 09:35 am