ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2013ರಲ್ಲಿ ನುಡಿದಿದ್ದ ಭವಿಷ್ಯವು ನಿಜವಾಗಿದೆ. ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ (2013ರಲ್ಲಿ) ಪುಣೆಯ ಫರ್ಗುಸನ್ ಕಾಲೇಜ್‌ನಲ್ಲಿ ಭಾಷಣ ಮಾಡಿದ್ದರು. ಈ ವೇಳೆ, "ನಾವು ಒಲಿಂಪಿಕ್ಸ್ ಹೆಚ್ಚು ಪದಕ ಗೆಲ್ಲಬೇಕಾದರೆ ನಮ್ಮ ಯುವ ಸೈನಿಕರಿಗೆ ಸರಿಯಾದ ತರಬೇತಿ ನೀಡಬೇಕು. ಸೈನಿಕರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದರೆ 8-10 ಚಿನ್ನದ ಪದಕಗಳನ್ನು ಗೆಲ್ಲುತ್ತಾರೆ" ಎಂದು ಹೇಳಿದ್ದರು.
ಆ ಭವಿಷ್ಯವಾಣಿಯನ್ನು ಇದೀಗ ಟೋಕಿಯೋ ಒಲಿಂಪಿಕ್ಸ್‍ನ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ನೀರಜ್ ಚೂಪ್ರಾ ನಿಜವಾಗಿಸಿದ್ದಾರೆ. ಅಲ್ಲದೆ ಒಲಿಂಪಿಕ್ಸ್‍ನ ಅಥ್ಲೆಟಿಕ್ಸ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
PublicNext
08/08/2021 06:15 pm