ನವದೆಹಲಿ: ಪಂಜಾಬ್ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಎದುರಾಗಿದ್ದು, ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ಆದರೆ ಈ ಮಧ್ಯೆ ಕೆಲವು ಪತ್ರಕರ್ತರು ಟ್ವಿಟ್ಟರ್‌ನಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಟ್ಯಾಗ್ ಮಾಡುವ ಬದಲು ಭಾರತ ರಾಷ್ಟ್ರೀಯ ಫುಟ್ಬಾಲ್ ತಂಡದ ಗೋಲ್‌ಕೀಪರ್ ಅಮರೀಂದರ್ ಸಿಂಗ್ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಫುಟ್ಬಾಲ್ ಆಟಗಾರ ಅಮರೀಂದರ್ ಸಿಂಗ್, "ಮಾಧ್ಯಮ ಮಿತ್ರರೆ, ಪತ್ರಕರ್ತರೆ ನಾನು ಪಂಜಾಬ್‌ನ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅಲ್ಲ. ಭಾರತ ಫುಟ್ಬಾಲ್ ತಂಡದ ಗೋಲ್‌ಕೀಪರ್. ದಯವಿಟ್ಟು ನನ್ನನ್ನು ಟ್ಯಾಗ್ ಮಾಡುವುದನ್ನು ನಿಲ್ಲಿಸಿ" ಎಂದು ಕೇಳಿಕೊಂಡಿದ್ದಾರೆ.
PublicNext
30/09/2021 05:27 pm