ಇಸ್ಲಾಮಾಬಾದ್: ಭಾರತದ ಪ್ರಧಾನಿ ನರೇಂದ್ರ ಮೋದಿ ಮನಸ್ಸು ಮಾಡಿದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಬೀದಿಪಾಲಾಗಬಹುದು ಎಂದು ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ ಆತಂಕ ಹೊರ ಹಾಕಿದ್ದಾರೆ.
ಪಾಕ್ ರಾಷ್ಟ್ರ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಗುರುವಾರ ಅಂತರ ಪ್ರಾಂತೀಯ ವ್ಯವಹಾರಗಳ ಸೆನೆಟ್ ಸ್ಥಾಯಿ ಸಮಿತಿಯ ಮುಂದೆ ಹಾಜರಾದ ರಮೀಜ್ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. "ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗೆ ಶೇಕಡಾ 90ರಷ್ಟು ಧನಸಹಾಯ ಭಾರತದಿಂದ ಬರುತ್ತದೆ. ಈ ಹಣದಿಂದಲೇ ಪಾಕಿಸ್ತಾನದಲ್ಲಿ ನಡೆಯುವ ಟೂರ್ನಿಗಳಿಗೆ ಐಸಿಸಿ ಹಣ ನೀಡುತ್ತಿದೆ. ಪಾಕಿಸ್ತಾನದಲ್ಲಿ ನಡೆಯುವ ಕ್ರಿಕೆಟ್ ಟೂರ್ನಿಗಳಿಗೆ ಐಸಿಸಿ ಶೇ. 50 ರಷ್ಟು ಧನಸಹಾಯ ಮಾಡುತ್ತಿದೆ. ಒಂದು ವೇಳೆ ಭಾರತದ ಪ್ರಧಾನಿ, ನಾವು ಪಾಕಿಸ್ತಾನಕ್ಕೆ ಫಂಡಿಂಗ್ ಮಾಡುವುದಿಲ್ಲವೆಂದರೆ ಪಾಕ್ ಕ್ರಿಕೆಟ್ ಮಂಡಳಿ ಮುಚ್ಚಿ ಹೋಗಬಹುದು. ಹೀಗಾಗಿ ನಾವು ಆತ್ಮನಿರ್ಭರತೆಯನ್ನು ಸಾಧಿಸಬೇಕು" ಎಂದು ಹೇಳಿದ್ದಾರೆ.
PublicNext
09/10/2021 03:13 pm