ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಹ್ಮದ್‌ ಶಮಿ ಓರ್ವ ಕ್ರೀಡಾಪಟು ಎಂದು ನೋಡಿ

ಧಾರವಾಡ: ಮೊನ್ನೆ ನಡೆದ ಭಾರತ ಮತ್ತು ಪಾಕಿಸ್ತಾನ ಟಿ-20 ಕ್ರಿಕೆಟ್ ಮ್ಯಾಚ್‌ನಲ್ಲಿ ಪಾಕಿಸ್ತಾನ ಗೆದ್ದಿದ್ದಕ್ಕೆ ಭಾರತದ ವೇಗಿ ಬೌಲರ್ ಮಹ್ಮದ್ ಶಮಿ ಮೇಲೆ ಗಂಭೀರ ಆರೋಪಗಳು ಕೇಳಿ ಬಂದಿವೆ. ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರ ಪ್ರಮುಖರಾದ ಸುನೀಲ ಅಂಬೇಕರ ಅವರು ಸೂಕ್ಷ್ಮ ಉತ್ತರವೊಂದನ್ನು ಕೊಟ್ಟಿದ್ದಾರೆ.

ಧಾರವಾಡದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕ್ರೀಡೆ ಮತ್ತು ಕ್ರೀಡಾಪಟುಗಳು ಯಾವುದೇ ಕಾರಣಕ್ಕೂ ಆ ರೀತಿ ನೋಡಬಾರದು ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಮೇಲೆ ಮಾಡುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಂಘ ತನ್ನ ಕೆಲಸ ಮಾಡುತ್ತಿದೆ. ಸಾಮಾಜಿಕ ಸೇವೆಗಾಗಿ ಸಂಘ ಸಾಕಷ್ಟು ಕೆಲಸ ಮಾಡುತ್ತಿದೆ. ಈ ಸಂದರ್ಭದಲ್ಲಿ ಇಷ್ಟನ್ನೇ ಹೇಳಬಹುದು ಎಂದರು.

ಇನ್ನು ಪಂಜಾಬ್ ಮಾಜಿ ಸಿಎಂ ಅಮರೇಂದರ್ ಸಿಂಗ್ ಅವರು ಪಾಕಿಸ್ತಾನದ ಪತ್ರಕರ್ತೆ ಜೊತೆ ಇರುವ ಫೋಟೋ ವೈರಲ್ ಆಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ಅ.30 ರಂದು ಮಾತನಾಡುತ್ತೇವೆ ಎಂದರು.

Edited By : Manjunath H D
PublicNext

PublicNext

26/10/2021 02:37 pm

Cinque Terre

38.75 K

Cinque Terre

0

ಸಂಬಂಧಿತ ಸುದ್ದಿ