ಪಣಜಿ: ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ)ಗೆ ಸೇರ್ಪಡೆಯಾಗಿದ್ದಾರೆ.
2022ರ ಗೋವಾ ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ ಮೂರು ದಿನಗಳ ಗೋವಾ ಪ್ರವಾಸದಲ್ಲಿರುವ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಲಿಯಾಂಡರ್ ಪೇಸ್ ಅವರು ಇಂದು ಟಿಎಂಸಿಗೆ ಸೇರಿದ್ದಾರೆ. ಇದಕ್ಕೂ ಮುನ್ನ ಬಾಲಿವುಡ್ ನಟಿ ನಫೀಸಾ ಅಲಿ ಮತ್ತು ಮೃಣಾಲಿನಿ ದೇಶಪ್ರಭು ದೀದಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ನ್ನು ಸೇರ್ಪಡೆಯಾಗಿದ್ದರು.
ಟಿಎಂಸಿ ಸೇರ್ಪಡೆಯಾದ ಬಳಿಕ ಮಾತನಾಡಿದ ಲಿಯಾಂಡರ್ ಪೇಸ್, ನಾನು ಟೆನ್ನಿಸ್ನಿಂದ ನಿವೃತ್ತನಾಗಿದ್ದೇನೆ. ಇನ್ನು ಮುಂದೆ ರಾಜಕೀಯ ಎಂಬ ವಾಹನವನ್ನೇರಿ ಜನ ಸೇವೆ ಮಾಡಲು ನಿರ್ಧಾರ ಮಾಡಿದ್ದೇನೆ. ಮಮತಾ ಬ್ಯಾನರ್ಜಿ ನಿಜಕ್ಕೂ ಒಬ್ಬ ಚಾಂಪಿಯನ್ ಎಂದು ಹೇಳಿದ್ದಾರೆ.
PublicNext
29/10/2021 11:20 pm