ಮುಂಬೈ: ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಟೀಂ ಇಂಡಿಯಾ ಹೆಡ್ಕೋಚ್ ರಾಹುಲ್ ದ್ರಾವಿಡ್ ತಳ್ಳಿಹಾಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಇದೇ ತಿಂಗಳು 12ರಿಂದ 15 ರವರೆಗೆ ಬಿಜೆಪಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ನಾನು ಪಾಲ್ಗೊಳ್ಳುತ್ತೇನೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಆದ್ರೆ ನಾನು ಯಾವುದೇ ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಈ ವರದಿಗಳು ಅಪ್ಪಟ್ಟ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
PublicNext
11/05/2022 05:45 pm