ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Breaking- ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿಧಿವಶ

ನವದೆಹಲಿ: ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ (65) ಇಂದು ನಿಧನ ಹೊಂದಿದ್ದಾರೆ.

ಲೋಕಸಭೆ ಅಧಿವೇಶನ ಆರಂಭವಾದಾಗ ಎಲ್ಲ ಸಂಸದರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅಂಗಡಿ ಅವರಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ನಿಧನರಾಗಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸುರೇಶ್ ಅಂಗಡಿ ಪ್ರತಿನಿಧಿಸುತ್ತಿದ್ದರು. ಅವರು 2004, 2009, 2014 ಮತ್ತು 2019ರಲ್ಲಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಮುಖಂಡರಾಗಿದ್ದರು. ಸದ್ಯ ಕೇಂದ್ರ ಸಚಿವ ಸಂಪುಟದ ರಾಜ್ಯ ರೈಲ್ವೇ ಸಚಿವರಾಗಿ ಕೆಲಸ ಮಾಡುತ್ತಿದ್ದರು.

Edited By : Vijay Kumar
PublicNext

PublicNext

23/09/2020 08:57 pm

Cinque Terre

187.9 K

Cinque Terre

122