ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿಯಲ್ಲಿ ಸುರೇಶ್​ ಅಂಗಡಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: 25 ಮಂದಿಗೆ ಮಾತ್ರ ಅವಕಾಶ

ನವದೆಹಲಿ: ಹೆಮ್ಮಾರಿ ಕೊರೊನಾಗೆ ತುತ್ತಾಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಕೇಂದ್ರ ಸಚಿವ ಸುರೇಶ್​ ಅಂಗಡಿ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ದೆಹಲಿಯ ದ್ವಾರಕಾ ಪ್ರದೇಶದ ಸೆಕ್ಟರ್ ನಂಬರ್ 24ರಲ್ಲಿರುವ ಲಿಂಗಾಯತ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಂಜೆ 4 ಗಂಟೆಗೆ ಲಿಂಗಾಯತ ಸಮುದಾಯದ ಧಾರ್ಮಿಕ ವಿಧಿ ವಿಧಾನ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ. ಈ ವೇಳೆ ಕೇವಲ 25 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಧಾರ್ಮಿಕ ವಿಧಿವಿಧಾನ ನೆರವೇರಿಸಲು ಬಾಳಯ್ಯ ಹಿರೇಮಠ ಅವರು ಅಂಗಡಿ ಅವರ ಕುಟುಂಬದೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.

Edited By : Vijay Kumar
PublicNext

PublicNext

24/09/2020 04:43 pm

Cinque Terre

72.14 K

Cinque Terre

0