ಬೆಂಗಳೂರು: ಡಿಕೆ ಸಹೋದರರ ಮನೆ ಮೇಲೆ ಸಿಬಿಐ ರೇಡ್ ಮಾಡಿ ಒಂದಷ್ಟು ಪೂರಕ ಮಾಹಿತಿಯನ್ನು ಕಲೆಹಾಕಿದ್ದಾರೆ.
ಇನ್ನೂ ಅಧಿಕಾರಿಗಳು ರೇಡ ಮಾಡಿದ ಸ್ಥಿತಿಗತಿಗಳ ಕುರಿತು ಸರಣಿ ಟ್ವೀಟ್ ಮಾಡಿದ ಸಂಸದ ಡಿಕೆ ಸುರೇಶ್ ವಸ್ತುಸ್ಥಿತಿ ತಿಳಿಸಲು ಪ್ರಯತ್ನಿಸಿದ್ದಾರೆ.
ಪ್ರಮುಖವಾಗಿ ಕನಕಪುರ, ಬೆಂಗಳೂರು ಮತ್ತು ದಿಲ್ಲಿಯ ನಮ್ಮ ಮನೆ ಮತ್ತು ಕಛೇರಿಗಳಿಗೆ ಬಂದು ಯಾವುದೇ ಕಿರುಕುಳ ನೀಡದೇ ವೃತ್ತಿಪರವಾಗಿ ನಡೆದುಕೊಂಡ CBI ಅಧಿಕಾರಿಗಳಿಗೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.
ಅಧಿಕಾರಿಗಳ ದಾಖಲೆ ಪರಿಶೀಲನೆಯಲ್ಲಿ ನನ್ನ ಮತ್ತು ನನ್ನ ಅಣ್ಣನ ಮನೆಯಿಂದ ಸೇರಿ ಒಟ್ಟು 6.78 ಲಕ್ಷ ರೂಪಾಯಿಗಳು ಸಿಕ್ಕಿರುತ್ತದೆ.
ಅದರಲ್ಲಿ ನನ್ನ ದೆಹಲಿ ನಿವಾಸದಲ್ಲಿ 1.57 ಲಕ್ಷ, ಬೆಂಗಳೂರಿನ ನನ್ನ ಅಣ್ಣನ ನಿವಾಸದಲ್ಲಿ 1.71 ಲಕ್ಷ, ಅವರ ಬೆಂಗಳೂರಿನ ಕಚೇರಿಯಲ್ಲಿ 3.5 ಲಕ್ಷ ರೂಪಾಯಿಗಳು ಅಧಿಕಾರಿಗಳಿಗೆಸಿಕ್ಕಿರುವುದನ್ನು ಖಾತ್ರಿ ಪಡಿಸಿದ್ದಾರೆ.
ಇನ್ನು ನನ್ನ ಅಣ್ಣನ ದಿಲ್ಲಿ ಮನೆ ಮತ್ತು ನನ್ನ ಬೆಂಗಳೂರಿನ ಮನೆಯಲ್ಲಿ ಯಾವುದೇ ಹಣ ಸಿಕ್ಕಿರುವುದಿಲ್ಲ.
ಹಾಗೆಯೇ ನಮ್ಮ ಎರಡೂ ಮನೆಗಳಲ್ಲಿ ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ಆಭರಣಗಳನ್ನೂ ವಶಪಡಿಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ಆಭರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ IT ಮತ್ತು ED ಗೆ ಕೊಟ್ಟ ದಾಖಲೆಗಳನ್ನೇ ಮತ್ತೊಮ್ಮೆ CBI ಸ್ಪಷ್ಟನೆ ತಗೆದುಕೊಂಡಿದೆ.
ಇನ್ನು CBI ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು 57 ಲಕ್ಷ ರೂ. ಸಿಕ್ಕಿದ ಮಾಹಿತಿ ಕೊಟ್ಟಿದ್ದಾರೆ.
ಇದರಲ್ಲಿ ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು ಎಂದಿದ್ದಾರೆ.
PublicNext
06/10/2020 03:11 pm