ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಬಹುದು, ಅವರಿಗೆ ಅವಕಾಶವಷ್ಟೆ ಮುಖ್ಯ: ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಹಾಗೂ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಹಾಗೂ ಅವರ ಕುಟುಂಬದವರು ಅವಕಾಶವಾದಿಗಳು. ಪಕ್ಷಸ್ವಾರ್ಥ ಇರುವವರು. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಬಿಜೆಪಿ ಜೊತೆಯೂ ಹೋಗುತ್ತಾರೆ. ಆರ್ ಎಸ್ ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು ಎಂದು ಕುಟುಕಿದರು.

Edited By : Vijay Kumar
PublicNext

PublicNext

19/09/2020 09:28 pm

Cinque Terre

64.23 K

Cinque Terre

5

ಸಂಬಂಧಿತ ಸುದ್ದಿ