ಬೆಂಗಳೂರು: ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುವ ಶಕ್ತಿಯನ್ನು ಭಗವಂತ ಕರುಣಿಸಿದ್ದಾನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳುವ ಮೂಲಕ ಪರೋಕ್ಷವಾಗಿ ತಾವು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ಪಟ್ಟಣದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಹಾಗೂ ಪಕ್ಷದ ವರಿಷ್ಠರು ಸಂಪುಟ ವಿಸ್ತರಣೆ ಬಗ್ಗೆ ತಿರ್ಮಾನಿಸುತ್ತಾರೆ. ನಾಡಿನ ಜನರು ಶ್ರೀರಾಮುಲುಗೆ ಒಳ್ಳೆಯದಾಗಬೇಕೆಂದು ಬಯಸುತ್ತಾರೆ. ಪಕ್ಷ ಯಾವ ತಿರ್ಮಾನ ಕೈಗೊಳ್ಳಲಿದೆ ಅಂತ ಕಾದು ನೋಡುತ್ತೇನೆ ಎಂದು ಹೇಳಿದರು.
ಇದೇ ವೇಳೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿ, ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರದ ವಿರುದ್ಧ ಸಿದ್ದರಾಮಯ್ಯನವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ವಿಧಾನಸಭೆ ಒಳಗಿಲ್ಲದವರ ಬಗ್ಗೆ ಚರ್ಚಿಸಿ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದಾರೆ. ಆದರೆ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಗುಡುಗಿದರು.
PublicNext
29/09/2020 06:19 pm