ಬೆಂಗಳೂರು: ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿ ಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿ ಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯನ ವಿರುದ್ಧ ಲೇವಡಿ ಮಾಡಿದ್ದಾರೆ.
ಜೆಡಿಎಸ್ ಪಕ್ಷ ಅವಕಾಶವಾದಿಗಳ ಪಕ್ಷ ಎಂಬ ಸಿದ್ದರಾಮಯ್ಯ ಅವರ ಟ್ವಿಟಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ.
ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ ಬೆಕ್ಕಿನ ಮುಖವಾಡದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
20/09/2020 05:56 pm