ಬೆಂಗಳೂರು: ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ, ಸರ್ಕಾರದ ಮುಂದಿನ ನಡೆ ನೋಡಿಕೊಂಡು ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಜೂಮ್ ಮೀಟಿಂಗ್‌ನಲ್ಲಿ ವಿವಿಧ ರೈತ ಮುಖಂಡರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸೆಪ್ಟೆಂಬರ್ 25ರಂದು ಕರ್ನಾಟಕ ಬಂದ್ ಇರುವುದಿಲ್ಲ. ಅಖಿಲ ಭಾರತೀಯ ಕಿಸಾನ್ ಸಂಘರ್ಷ ಸಮಿತಿ ಬಂದ್‍ಗೆ ಕರೆ ಕೊಟ್ಟಿದೆ. ಪಂಜಾಬ್ ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ಚಳುವಳಿ ತೀವ್ರವಾಗಿ ನಡೆಯುತ್ತಿದೆ. ಈ ಬಂದ್‍ಗೆ ನಾವು ಬೆಂಬಲ ಕೊಡುತ್ತೇವೆ. ಹೀಗಾಗಿ ಕೇವಲ ರಾಷ್ಟ್ರಿಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುತ್ತೇವೆ. ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆಯನ್ನು ಕೈಬಿಟ್ಟರೆ ರಾಜ್ಯ ರೈತಸಂಘದಿಂದ ಬಂದ್ ಇರಲ್ಲ. ಒಂದು ವೇಳೆ ಇದೇ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಜಾರಿಗೆ ತಂದರೆ ಬಂದ್ ಮಾಡುತ್ತೇವೆ ಎಂದರು.
PublicNext
22/09/2020 09:04 pm