ಬೆಂಗಳೂರು: ಯಾರ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪವಿಲ್ಲ ಹೇಳಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳ ಮೇಲೆ ಭ್ರಷ್ಟಾಚಾರದ ಆರೋಪ ಬರುವುದು ಸಹಜ. ಯಾರ ಕುಟುಂಬದಲ್ಲಿ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿಲ್ಲ ಹೇಳಿ? ಭ್ರಷ್ಟಾಚಾರ ವಿಷಯಗಳ ತಾರ್ಕಿಕ ಅಂತ್ಯ ಎಲ್ಲಿಗೆ ಹೋಗುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.
ಅವಿಶ್ವಾಸ ನಿರ್ಣಯ ವಿಚಾರದ ಬಗ್ಗೆ ಜೆಡಿಎಸ್ ಈಗಲೇ ಏನು ಮಾತನಾಡುವುದಿಲ್ಲ. ಸಂದರ್ಭ ಬಂದಾಗ ಯೋಚಿಸುತ್ತೇನೆ. ನನ್ನ ವಿಶ್ವಾಸಕ್ಕಿಂತ ರಾಜ್ಯದ ಜನತೆಯ ವಿಶ್ವಾಸ ಮುಖ್ಯವಾಗಿದ್ದು, ಕೊರೊನಾ ಸಂಕಷ್ಟ ಇರುವಾಗ ನಾವೆಲ್ಲರೂ ಒಟ್ಟಾಗಿ ಕೆಲಸ ನಿರ್ವಹಿಸಬೇಕಾದ ಸಂದರ್ಭದಲ್ಲಿ ಗೊಂದಲ ಮೂಡಿಸುವ ನಡೆಗಳು ಏಕೆ ಎಂದು ಪ್ರಶ್ನಿಸಿದರು.
PublicNext
25/09/2020 08:30 pm