ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗುಂಡಿಯನ್ನು ಒತ್ತುವುದರೊಂದಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗೆ ತಲಾ 2,000 ರೂ.ನಂತೆ 18 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರ ಅಹೋರಾತ್ರಿ ಪ್ರತಿಭಟನೆ ಮುಂದುವರಿದಿರುವಾಗಲೇ ಪಿಎಂ-ಕಿಸಾನ್ ನಿಧಿ ನೀಡಿದ್ದಾರೆ. ಈ ಯೋಜನೆ ಅಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 3 ಕಂತುಗಳಲ್ಲಿ ವಾರ್ಷಿಕ 6 ಸಾವಿರ ರೂ. ನೆರವು ನೀಡಲಾಗುತ್ತದೆ. ಈ ಪೈಕಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿ ಪ್ರಯುಕ್ತ ‘ಉತ್ತಮ ಆಡಳಿತದ ದಿನಾಚರಣೆ’ಯಾದ ಡಿ.25ರಂದು ಒಂದು ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ.
PublicNext
26/12/2020 10:07 am