ಬೆಂಗಳೂರು: ಮಾತುಕತೆ ಬಳಿಕವೇ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ. ಆದರೆ ಈಹ ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಸದ್ಯ ನಾನು ಚಿಕ್ಕಮಗಳೂರಿನಲ್ಲಿ ಇರುವೆ. ನಾಳೆ ವಿಷ್ಣುವರ್ಧನ್ ಅವರ ಅಭಿಮಾನಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ವಿಷ್ಣು ಅವರ ಪ್ರತಿಮೆಯು ಶ್ರೀ ಬಾಲಗಂಗಾಧರ ಸ್ವಾಮೀಜಿಗಳ ವೃತ್ತದಲ್ಲಿದೆ. ಅಲ್ಲಿ ಶ್ರೀಗಳ ಪ್ರತಿಮೆ ನಿರ್ಮಾಣ ಮಾಡುವ ಚಿಂತನೆ ನಡೆದಿದೆ. ಹೀಗಾಗಿ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಸಮೀಪದ ಪಾರ್ಕ್ ಅಥವಾ ವಿಜಯನಗರ್ ಬಸ್ ನಿಲ್ದಾಣದ ಬಳಿಕ ಪ್ರತಿಷ್ಠಾಪಿಸುವ ಬಗ್ಗೆ ಚರ್ಚೆಯಾಗಿದೆ ಎಂದರು.
PublicNext
26/12/2020 01:49 pm