ಬೆಂಗಳೂರು: ಒಂದು ಪ್ರಾದೇಶಿಕ ಪಕ್ಷಕ್ಕೆ ದೇಶವನ್ನು ಆಳುವ ಶಕ್ತಿ ಇತ್ತು. ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತೀರಿ. ನಿಮ್ಮ ಸ್ವಾತಂತ್ರ್ಯ ಏನು..? ಜೆಡಿಎಸ್ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ನೇರಾನೇರ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಬಗ್ಗೆ ಮಾತನಾಡಿದರೆ ತುಂಬಾ ಮಾತನಾಡ್ತೀನಿ. ಈ ಹಿಂದೆ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತ ಮಾಡ್ತೀವಿ ಅಂದಿದ್ರು. ಆಗ ನಾವು ಕಾಂಗ್ರೆಸ್ ಜೊತೆ ನಿಲ್ಲಲಿಲ್ಲವೇ?, ಇದಕ್ಕೆ ನಾನೇ ಕಾರಣ ಹೊರತು ಕುಮಾರಸ್ವಾಮಿ ಅಲ್ಲ ಎಂದರು.
ಸಭಾಪತಿ ರಾಜೀನಾಮೆ ವಿಚಾರದಲ್ಲಿ ನನ್ನ ಜಾತ್ಯಾತೀತತೆ ಪ್ರಶ್ನೆ ಮಾಡುತ್ತಿದ್ದಾರೆ. ಹಾಗಾದರೆ ಇವರು ಮಾಡುತ್ತಿರುವುದು ಏನು..? ತಮಿಳುನಾಡು, ಬಿಹಾರದಲ್ಲಿ ಏನಾಯ್ತು..? ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಸೇರಿ ಸರ್ಕಾರ ಮಾಡಿಕೊಂಡಿಲ್ವಾ..? ಗೋದ್ರಾ ಹತ್ಯಾಕಾಂಡ ವಿಚಾರ ಏನಾಯ್ತು..? ಮುಸ್ಲಿಂರನ್ನು ದಾರಿ ತಪ್ಪಿಸಿದ್ದು ಯಾರು..? ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಮಾಜಿ ಪ್ರಧಾನಿ ತಿರುಗೇಟು ನೀಡಿದರು.
PublicNext
26/12/2020 05:06 pm