ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪಚುನಾವಣೆಗೆ ತಯಾರಿ ನಡೆಸ್ತಿದ್ದಾರಾ ಸುರೇಶ್ ಅಂಗಡಿ ಪುತ್ರಿ?

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರ ಪುತ್ರಿ ಹಾಗೂ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರ ಸೊಸೆ ಶ್ರದ್ಧಾ ಶೆಟ್ಟರ್‌ ಅವರು ಇದೇ ಮೊದಲ ಬಾರಿಗೆ ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು, ಪಕ್ಷದ ನಾಯಕರೊಂದಿಗೆ ವೇದಿಕೆ ಹಂಚಿಕೊಂಡರು.

ನಗರದ ಎಪಿಎಂಸಿ ಆವರಣದಲ್ಲಿ ಪಕ್ಷದಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ ಮತ್ತು ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ ಶ್ರದ್ಧಾ ಶೆಟ್ಟರ್ ಭಾಗವಹಿಸಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡಲಾಗುತ್ತದೆಯೇ ಎನ್ನುವ ಸುದ್ದಿಗಳು ರೆಕ್ಕೆಪುಕ್ಕ ಪಡೆದುಕೊಂಡಿವೆ.

ಪಕ್ಷದಿಂದ ಆಯೋಜಿಸಲಾಗಿದ್ದ ರೈತರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ಖುಷಿಯಾಗಿದೆ. ಕಾರ್ಯಕರ್ತರು ಮತ್ತು ಮುಖಂಡರು ಮನೆಗೂ ಆಗಾಗ ಭೇಟಿ ನೀಡುತ್ತಿರುತ್ತಾರೆ. ಆ ಸಂಪರ್ಕವನ್ನು ಇನ್ನೂ ಬೆಳೆಸಿಕೊಳ್ಳುತ್ತಾ ಹೋಗುತ್ತೇವೆ’ ಎಂದರು. ‘ಉಪ ಚುನಾವಣೆಯಲ್ಲಿ ಸ್ಪರ್ಧಿಸುವಿರಾ’ ಎಂಬ ಪ್ರಶ್ನೆಗೆ ‘ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ’ ಎಂದರು.

Edited By : Nagaraj Tulugeri
PublicNext

PublicNext

26/12/2020 08:20 pm

Cinque Terre

88.51 K

Cinque Terre

4

ಸಂಬಂಧಿತ ಸುದ್ದಿ