ನವದೆಹಲಿ: ಕೇಂದ್ರ ಕೃಷಿ ಕಾನೂನು ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಇಷ್ಟೇ ಅಲ್ಲ ಕೇಂದ್ರದ ಎಪಿಎಂಪಿಸಿ ಕಾಯ್ದೆ ತಿದ್ದುಪಡಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸ್ವತಃ ರಾಹುಲ್ ಗಾಂಧಿಯ ಹಳೆಯ ವಿಡಿಯೋ ಶೇರ್ ಮಾಡಿದ್ದಾರೆ. ಈ ವಿಡಿಯೋದಲ್ಲಿನ ಮಾತು ಇದೀಗ ಕಾಂಗ್ರೆಸ್ ಪಕ್ಷಕ್ಕೆ ಇರಿಸುಮುರಿಸು ತಂದಿದೆ. ರೈತರು ತಮ್ಮ ಉತ್ಪನ್ನವನ್ನು ಎಪಿಎಂಸಿ, ಮಂಡಿ ಮಾತ್ರವಲ್ಲ, ತಮಗೆ ಎಲ್ಲಿ ಬೇಕಾದರೂ ಮಾರಾಟ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ ನೂತನ ಕೃಷಿ ಕಾನೂನು ಮೂಲಕ ನೀಡಿದೆ.
ಇದಕ್ಕೆ ಸದ್ಯ ಪ್ರತಿಭಟನೆ ನಡೆಸುತ್ತಿರುವ ರೈತರು ಸೇರಿದತೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಆದರೆ ಜೆಪಿ ನಡ್ಡ ಹಂಚಿಕೊಂಡಿರುವ ಹಳೆ ವಿಡಿಯೋದಲ್ಲಿ ರಾಹುಲ್, ರೈತರು ತಮ್ಮ ಉತ್ಪನ್ನವನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ತಿದ್ದುಪಡಿ ಅಗತ್ಯವಿದೆ ಎಂದು ಹೇಳಿದ್ದಾರೆ.
PublicNext
27/12/2020 08:03 pm