ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಯಮಾಡಿ ಕೃಷಿ ಕಾಯ್ದೆ ರದ್ದು ಮಾಡಿ: ಕೇಜ್ರಿವಾಲ್

ನವದೆಹಲಿ: ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ರೈತರು ದೆಹಲಿಯ ಸಿಂಘೂ ಗಡಿಯಲ್ಲಿ ಹೋರಾಟ ನಡೆಸಿದ್ದಾರೆ. ಹೋರಾಟನಿರತ ಸ್ಥಳಕ್ಕೆ ಎರಡನೇ ಸಲ ಭೇಟಿ ನೀಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ , ರೈತರು ಕೃಷಿಯ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದಾರೆ. ದಯಮಾಡಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಕೇಂದ್ರದ ಯಾವುದೇ ಸಚಿವರು ರೈತರೊಂದಿಗೆ ಮುಕ್ತವಾದ ಚರ್ಚೆ ನಡೆಸುವ ಸವಾಲು ಸ್ವೀಕರಿಸಲಿ ಹಾಗೂ ಈ ಕಾಯ್ದೆಗಳು ಎಷ್ಟು ಉಪಯುಕ್ತ ಅಥವಾ ಹಾನಿಕಾರಕ ಎಂಬುದು ಅದರಿಂದ ತಿಳಿಯುತ್ತದೆ. ರೈತರು ಅವರ ಉಳಿವಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾಯ್ದೆಗಳು ಅವರ ಭೂಮಿಯನ್ನು ಅವರಿಂದ ಕಸಿದುಬಿಡುತ್ತವೆ. ಕೇಂದ್ರ ಸರ್ಕಾರವನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ, ದಯಮಾಡಿ ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

27/12/2020 10:49 pm

Cinque Terre

77.47 K

Cinque Terre

13

ಸಂಬಂಧಿತ ಸುದ್ದಿ