ಹೊಸ ದಿಲ್ಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಬ್ಬರೂ ಕೂಡಾ, ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಕ್ಕೆ ಗೈರು ಹಾಜರಾಗಿದ್ದಾರೆ.
ಪಕ್ಷದ 136ನೇ ಸಂಸ್ಥಾಪನಾ ದಿನದಂದು ಇಬ್ಬರೂ ನಾಯಕರು ಬಾರದ ಕಾರಣ, ಪಕ್ಷದ ಹಿರಿಯ ನಾಯಕ ಎ.ಕೆ ಆಂಟನಿ ಅವರು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದರು.
PublicNext
28/12/2020 04:09 pm