ಬೆಂಗಳೂರು: ಧಾರ್ಮಿಕ ನಂಬಿಕೆ ಮತ್ತು ಮಾಂಸಾಹಾರದ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪದೇ ಪದೇ ಟೀಕೆಗೆ ಗುರಿಯಾಗುತ್ತಿದ್ದಾರೆ. ಭಾನುವಾರಷ್ಟೇ ಹನುಮ ಜಯಂತಿ, ನಾನ್‌ವೆಜ್ ಬಗ್ಗೆ ಮಾತನಾಡಿ ಜನಾಕ್ರೋಶಕ್ಕೆ ಗುರಿಯಾಗಿದ್ದರು. ಈಗ ಗೋ ಹತ್ಯೆ ಪರ ಮಾತನಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ''ವಯಸ್ಸಾದ ಹಸು, ಗಂಡು ಕರುಗಳು ಹೀಗೆ ಅನುಪಯುಕ್ತ ಜಾನುವಾರುಗಳನ್ನು ರೈತರು ಏನು ಮಾಡಬೇಕು? ಎಂದು ಪ್ರಶ್ನಿಸಿದರೆ ನನ್ನನ್ನು ಗೋಮಾತೆಯ ವಿರೋಧಿ ಅಂತಾರೆ. ವಯಸ್ಸಾದ ಹಸುವೊಂದನ್ನು ಸಾಕಲು ರೈತನಿಗೆ ನಿತ್ಯ 100 ರೂಪಾಯಿ ಖರ್ಚಾಗುತ್ತೆ, ಅದನ್ನೇನಾದ್ರೂ ಬಿಜೆಪಿಯವರು ಕೊಡ್ತಾರಾ ಎಂದು ಪ್ರಶ್ನಿಸಿದ್ದಾರೆ.
PublicNext
28/12/2020 08:06 pm