ಬೆಂಗಳೂರು: ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆ ವಿವಾದ ಇನ್ನೂ ತಣ್ಣಗಾಗಿಲ್ಲ. ಈ ನಡುವೆ ಸುಗ್ರೀವಾಜ್ಞೆ ಮೂಲಕ ಮಸೂದೆ ಅಂಗೀಕಾರ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಮಸೂದೆಯ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಭೆ ಈ ಮೊದಲೇ ತೀರ್ಮಾನಿಸಿದೆ. ನಾಳೆ ವಿಧೇಯಕ ಅಂಗೀಕಾರಕ್ಕಾಗಿ ರಾಜ್ಯಪಾಲರಿಗೆ ಕಳುಹಿಸಲಿದ್ದೇವೆ. ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಅಸ್ತಿತ್ವದಲ್ಲಿದೆ. ಇದೇ ಕಾಯ್ದೆಗೆ ಈಗ ಹೊಸ ರೂಪ ಕೊಡಲಾಗಿದೆ. ದಂಡ ಹೆಚ್ಚಳ ಸೇರಿದಂತೆ ಹೊಸ ರೂಪ ಕೊಡಲಾಗಿದೆ. ಇದರಲ್ಲಿ ರಾಜಕೀಯ ಮಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ಮಾಡುತ್ತಿದ್ದಾರೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
PublicNext
29/12/2020 07:51 am