ಚಿಕ್ಕಮಗಳೂರು: ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಆತ್ಮಹತ್ಯೆ ಪ್ರಕರಣ ಅವರ ಅಭಿಮಾನಿಗಳಿಗೆ ಶಾಕ್ ಕೊಟ್ಟಿದೆ. ಈ ಸಾವಿಗೆ ರಾಜಕೀಯ ನಾಯಕರು ಮರುಕಪಟ್ಟಿದ್ದಾರೆ.
ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಆತ್ಮಹತ್ಯೆಗೂ ಮುನ್ನ ಧರ್ಮೇಗೌಡ ಡೆತ್ ನೋಟ್ ಬರೆದಿಟ್ಟಿದ್ದರು. ಇದರಲ್ಲಿ ಮಾನಸಿಕ ಖಿನ್ನತೆಗೆ ಒಳಗಾದ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ಕೆಲಹೊತ್ತಿನಲ್ಲಿ ಈ ಡೆತ್ ನೋಟ್ ಬಗ್ಗೆ ಅಧಿಕೃತ ಮಾಹಿತಿ ಗೊತ್ತಾಗಲಿದೆ.
ವಿಧಾನಪರಿಷತ್ ನಲ್ಲಿ ಇತ್ತೀಚೆಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರ ಮೇಲೆ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಿತ್ತು. ಈ ವೇಳೆ ಬಿಜೆಪಿ ನಾಯಕರು ಜೆಡಿಎಸ್ ಸದಸ್ಯ ಹಾಗೂ ಉಪಸಭಾಪತಿ ಧರ್ಮೇಗೌಡ ಅವರನ್ನು ವಿಧಾನ ಪರಿಷತ್ ಸಭಾಪತಿ ಸ್ಥಾನದಲ್ಲಿ ಕೂರಿಸಿದ್ದರು. ಇದರಿಂದ ಕೆರಳಿದ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯರು ಧರ್ಮೇಗೌಡ ಅವರನ್ನು ಎಳೆದಾಡಿದ್ದರು.
ಅಂದು ನಡೆದ ಈ ಘಟನೆಯಿಂದ ಧರ್ಮೇಗೌಡ ಅವರು ಮನನೊಂದಿದ್ದರು ಎಂಬ ಮಾಹಿತಿ ಇದೆ.
PublicNext
29/12/2020 08:07 am