ಬೆಂಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ನಿಧನ ವೈಯಕ್ತಿಕವಾಗಿ ನನಗೆ ಜೀವನ ಅತ್ಯಂತ ಘೋರವಾದ ಘಟನೆ. ನನ್ನ ರಾಜಕೀಯ ಕೊನೆ ಘಟ್ಟದಲ್ಲಿ ಎಂದೂ ಮರೆಯಲಾಗದ ನೋವು ಇದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಣ್ಣೀರಿಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮೇಗೌಡರ ತಂದೆ ಲಕ್ಷ್ಮಯ್ಯ ಕಾಲದಿಂದಲೂ ನಾನು ಅವರ ಕುಟುಂಬದೊಂದಿಗೆ ನಂಟು ಹೊಂದಿದ್ದೆ. ಗ್ರಾಮ ಪಂಚಾಯತಿಯಿಂದ ಹಿಡಿದು ಸಹಕಾರ ಕ್ಷೇತ್ರ, ರಾಜಕೀಯ ಕ್ಷೇತ್ರದಲ್ಲಿ ಬೆಳೆದಿದ್ದರು. ಶಾಸಕರಾಗಿ ಉಪಸಭಾಪತಿಯಾಗಿ, ವಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ. ಕೊನೆಯ ಕಾಲದಲ್ಲಿ ಆದ ಘಟನೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಧರ್ಮೇಗೌಡರನ್ನು ನೆನೆದು ಭಾವುಕರಾದರು. ಇದು ನನ್ನ ರಾಜಕೀಯ ಜೀವನದ ಕೊನೆ ಘಟ್ಟದಲ್ಲಿ ನಡೆದ ಅತ್ಯಂತ ಕೆಟ್ಟ ಘಟನೆ ಎಂದು ದೇವೇಗೌಡ ಬಣ್ಣಿಸಿದ್ದಾರೆ.
PublicNext
29/12/2020 11:34 am