ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ರಾಜಕೀಯ ಎಂಟ್ರಿಗೂ ಮುನ್ನವೇ ವಿದಾಯ ಘೋಷಿಸಿದ ರಜನಿಕಾಂತ್

ಚೆನ್ನೈ : ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸ್ಪರ್ಧಿಸುತ್ತಾರೆ ಎನ್ನುವ ಮಾತಿಗೆ ಮೆಗಾ ಸ್ಟಾರ್ ಫುಲ್ ಸ್ಟಾಪ್ ಇಟ್ಟಿದ್ದಾರೆ.

ಅನಾರೋಗ್ಯದಿಂದಾಗಿ ರಾಜಕೀಯ ಪಕ್ಷ ಕಟ್ಟಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಸೂಪರ್ ಸ್ಟಾರ್ ರಜನಿಕಾಂತ್, ಡಿ. 31ರಂದು ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಘೋಷಿಸಿದ್ದ ನಾನು, ಸದ್ಯಕ್ಕೆ ಆ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮೂರು ಪುಟಗಳ ಪತ್ರವನ್ನು ಟ್ವೀಟ್ ಮಾಡಿರುವ ಅವರು, ಸದ್ಯಕ್ಕೆ ರಾಜಕೀಯಕ್ಕೆ ಬರಲು ಆಗುವುದಿಲ್ಲ.

ಆರೋಗ್ಯ ದೃಷ್ಠಿಯಿಂದ ಪಾರ್ಟಿ ಕಟ್ಟಲು ಆಗುತ್ತಿಲ್ಲ. ನಿಮ್ಮನ್ನು ನಿರಾಸೆಗೊಳಿಸಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾರೆ.

ಈ ಮೂಲಕ 70 ವರ್ಷ ವಯಸ್ಸಿನ ನಟ ರಜನಿಕಾಂತ್ ಅವರು ಸಕ್ರಿಯ ರಾಜಕೀಯ ಪ್ರವೇಶಕ್ಕೆ ಮುನ್ನ ದೊಡ್ಡ ಬಾಂಬ್ ಹಾಕಿದ್ದಾರೆ.

ಆರೋಗ್ಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

'ತಮಿಳುನಾಡಿನಲ್ಲಿ ಬದಲಾವಣೆ ತರುವ ಸಲುವಾಗಿ ನಾನು ರಾಜಕೀಯಕ್ಕೆ ಬರಲು ನಿರ್ಧರಿಸಿದ್ದೇನೆ. ಈ ಯೋಜನೆಯಲ್ಲಿ ನಾನು ಸಣ್ಣ ಸಾಧನವಷ್ಟೇ.

ನಾನು ಯಶಸ್ವಿಯಾದರೆ ಅದು ಜನರ ಯಶಸ್ಸಾಗಲಿದೆ. ನನ್ನ ಪ್ರಯತ್ನದಲ್ಲಿ ನಾನು ಸೋಲು ಕಂಡರೆ ಅದು ನಿಮ್ಮ ಸೋಲಾಗಲಿದೆ. ಈ ಪರಿವರ್ತನೆಯ ಪ್ರಯತ್ನದಲ್ಲಿ ನೀವು ನನ್ನ ಜತೆ ನಿಲ್ಲುವಂತೆ ಮನವಿ ಮಾಡುತ್ತೇನೆ.

ಎಲ್ಲವನ್ನೂ ಪರಿವರ್ತನೆ ಮಾಡೋಣ. ಅದು ಈಗ ಸಾಧ್ಯವಾಗದಿದ್ದರೆ, ಎಂದಿಗೂ ಸಾಧ್ಯವಾಗಲಾರದು' ಎಂದು ರಜನಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Edited By : Nirmala Aralikatti
PublicNext

PublicNext

29/12/2020 01:12 pm

Cinque Terre

79.83 K

Cinque Terre

3