ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನು ವಿರುದ್ಧವಾಗಿ ವಿಧಾನಸಭೆ ವಿಪಕ್ಷ ನಾಯ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದೆಲ್ಲ ಹೇಳುವವರು ಕನಿಷ್ಠ ದೇಶಕ್ಕೆಲ್ಲ ಅನ್ವಯವಾಗುವಂತಹ ಸಮಾನ ಗೋಹತ್ಯೆ ನಿಷೇಧ ಕಾನೂನು ತರಬಾರದೇಕೆ? ನಿಮಗೆ ತಾಕತ್ತಿದ್ದರೆ ಬಿಜೆಪಿ ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ. ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ ಎಂದು ಸವಾಲು ಹಾಕಿದ್ದಾರೆ.
ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ರಾಜ್ಯ ಬಿಜೆಪಿ ನಾಯಕರಿಗೆ ಇತ್ತು ಎಂದು ಕುಟುಕಿದ್ದಾರೆ.
PublicNext
29/12/2020 06:27 pm