ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋ ಹತ್ಯೆ ನಿಷೇಧ ಮಸೂದೆ ಹಿಂದೆ ಬಿಜೆಪಿಯ 2 ದುರುದ್ದೇಶ: ಸಿದ್ದು ಕಿಡಿ

ಬೆಂಗಳೂರು: ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸುವವರಿಗೆ ರಕ್ಷಣೆ ಕೊಡಬೇಕು ಎಂಬ ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ''ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ, ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ'' ಎಂದು ಪ್ರಶ್ನಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದಾಗಿ ರೈತರು ಮಾತ್ರ ಅಲ್ಲ, ಚರ್ಮದ ಉತ್ಪನ್ನಗಳ ತಯಾರಿಕೆಗೆ ಚರ್ಮದ ಕೊರತೆ ಎದುರಾಗಲಿದ್ದು, ಉತ್ಪಾದನೆ ಕುಂಠಿತಗೊಳ್ಳಲಿದೆ. ಇದರಿಂದ ನೇರವಾಗಿ ಮತ್ತು ಪರೋಕ್ಷವಾಗಿ ಈ ಕಸುಬನ್ನು ನಂಬಿ ಬದುಕುತ್ತಿರುವ ಸಾವಿರಾರು ಕುಟುಂಬಗಳು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಲಿವೆ ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ವಯಸ್ಸಾದ ಹಸುಗಳ ಪಾಲನೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊರಲಿದೆ ಎಂದು ಹೇಳಿದ್ದೀರಿ. ರಾಜ್ಯದಲ್ಲಿ ಎಷ್ಟು ಸರ್ಕಾರವೇ ನಡೆಸುತ್ತಿರುವ ಗೋಶಾಲೆಗಳಿವೆ? ಎಷ್ಟು ಹೊಸ ಗೋಶಾಲೆಗಳನ್ನು ತೆರೆಯಲಿದ್ದೀರಿ? ಇದಕ್ಕಾಗಿ ಎಷ್ಟು ಹಣ ಒದಗಿಸಿದ್ದೀರಿ? ಈ ವಿವರಗಳನ್ನು ಮೊದಲು ಬಹಿರಂಗಪಡಿಸಿ ಎಂದು ಆಗ್ರಹಿಸಿದ್ದಾರೆ.

Edited By : Vijay Kumar
PublicNext

PublicNext

29/12/2020 06:42 pm

Cinque Terre

86.62 K

Cinque Terre

11

ಸಂಬಂಧಿತ ಸುದ್ದಿ