ಚಿಕ್ಕೋಡಿ: ದೇಶದ ಬಡವರನ್ನ ಮತ್ತಷ್ಟು ಬಡವರನ್ನಾಗಿಸುವುದೇ ಬಿಜೆಪಿಯ ಅಜೆಂಡಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ದೇಶದಲ್ಲಿ ಸುಳ್ಳಿನ ರಾಜಕೀಯ ಮಾಡುತ್ತಲೇ ದೇಶದ ಜನರ ದಾರಿ ತಪ್ಪಿಸುತ್ತಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವ ಬಿಜೆಪಿಯವರೆ ಅತಿ ಹೆಚ್ಚು ಗೋ ಮಾಂಸವನ್ನು ವಿದೇಶಗಳಿಗೆ ರಪ್ತು ಮಾಡುತ್ತಿದ್ದಾರೆ. ಬಿಜೆಪಿಯ ರಾಜಕೀಯ ಲಾಭಕ್ಕಾಗಿ ಈಗ ಗೋಹತ್ಯೆ ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಇದಕ್ಕೂ ಮೊದಲೇ ಕಾಂಗ್ರೆಸ್ ಸರ್ಕಾರ ಈ ಕಾಯಿದೆ ಜಾರಿಗೆ ತಂದಿದೆ ಎಂದಿದ್ದಾರೆ. ಬಿಜೆಪಿಯವರು ನೆಹರು ಬಗ್ಗೆ ಟೀಕೆ ಮಾಡುತ್ತಾರೆ. ಆದರೆ, ದೇಶ ಇಷ್ಟು ಪ್ರಗತಿ ಹೊಂದಲು ನೆಹರು ಅವರೇ ಪ್ರಮುಖ ಕಾರಣ ಎನ್ನುವುದನ್ನ ಮರೆತಿದ್ದಾರೆ ಎಂದರು.
PublicNext
29/12/2020 09:18 pm