ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.
ಇಂದು ಬೆಳಗ್ಗೆ 8 ಗಂಟೆಗೆ ಮತಗಳ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ.
ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ತೀರ್ಮಾನವಾಗಲ್ಲಿದ್ದು, ಒಟ್ಟು 226 ತಾಲೂಕುಗಳ 5,728 ಗ್ರಾ.ಪಂ.ಗಳಿಗೆ ಎಲೆಕ್ಷನ್ ನಡೆದಿತ್ತು.
ಒಟ್ಟಾರೆ 5,728 ಗ್ರಾ.ಪಂ.ಗಳಿಗೆ 2 ಹಂತಗಳಲ್ಲಿ ಮತದಾನ ನಡೆದಿತ್ತು. ಹಾಗೂ 5,728 ಗ್ರಾ.ಪಂ.ಗಳ 91,339 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಈ ಪೈಕಿ 8,074 ಸ್ಥಾನಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆಯಾಗಿದೆ.
ಕೆಲವೆಡೆ ಮತದಾರರು ಗ್ರಾ.ಪಂ. ಚುನಾವಣೆ ಬಹಿಷ್ಕರಿಸಿದ್ದರು. ಹಾಗಾಗಿ ಉಳಿದ ಗ್ರಾ.ಪಂ. ಸ್ಥಾನಕ್ಕೆ 2 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧೆ ನಡೆಸಿದ್ದರು.
ಮೊದಲ ಹಂತದಲ್ಲಿ 43,238 ಸ್ಥಾನಗಳಿಗೆ ಮತದಾನ ನಡೆದಿತ್ತು. ಹಾಗೂ ಎರಡನೇ ಹಂತದಲ್ಲಿ 39,378 ಸ್ಥಾನಗಳಿಗೆ ಮತದಾನ ನಡೆದಿತ್ತು.
ವಿಶೇಷವೆಂದರೆ ಬೀದರ್ ಜಿಲ್ಲೆಯಲ್ಲಿ ಮಾತ್ರ ಮತದಾನಕ್ಕೆ ಇವಿಎಂ ಬಳಕೆ ಮಾಡಲಾಗಿತ್ತು. ಬೀದರ್ ಹೊರತುಪಡಿಸಿ ಉಳಿದ ಎಲ್ಲ ಕಡೆ ಮತ ಪತ್ರ ಬಳಸಿ ಚುನಾವಣೆ ನಡೆಸಲಾಗಿತ್ತು.
ಒಟ್ಟಾರೆಯಲ್ಲಿ ಮತದಾರರು ಯಾರಿ ಓಟ್ ನೀಡಿ ಯಾರಿಗೆ ಏಟು ನೀಡಿದ್ದಾರೆ ಎನ್ನುವುದು ಇಂದು ಬಯಲಾಗಲಿದೆ.
PublicNext
30/12/2020 07:51 am