ಕೊಡಗು: ಜೈಲಿನಿಂದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಮ್ಮೆಗುಂಡಿಯ ಬಿಜೆಪಿ ಅಭ್ಯರ್ಥಿ ಪುಲಿಯಂಡ ಬೋಪಣ್ಣ ಜೈಲಿನಲ್ಲಿದ್ದುಕೊಂಡೇ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.
ಇನ್ನೇನು ಪ್ರಚಾರದ ಅಂತ್ಯದಲ್ಲಿ ಜೈಲಿನಿಂದ ಬಿಡುಗಡೆಗೊಂಡು ಪ್ರಚಾರ ಕೈಗೊಂಡಿದ್ದರು. ಇದೀಗ, ಸತತ ನಾಲ್ಕನೇ ಬಾರಿಗೆ ಜಯ ಗಳಿಸಿದ್ದಾರೆ.
ಜಾತಿ ನಿಂದನೆ ಪ್ರಕರಣದಲ್ಲಿ ಇವರು ನ್ಯಾಯಾಂಗ ಬಂಧನದಲ್ಲಿದ್ದರು. ಖುದ್ದು ನಾಮಪತ್ರ ಸಲ್ಲಿಸಲು ಅವಕಾಶ ಸಿಕ್ಕಿರಲಿಲ್ಲ.
ತಮ್ಮ ಬೆಂಬಲಿಗರೊಬ್ಬರು ನಾಮಪತ್ರ ಸಲ್ಲಿಸಿದ್ದರು. ಬಳಿಕ ಜಾಮೀನು ಸಿಕ್ಕಿ, ಎರಡು ದಿನ ಪ್ರಚಾರ ನಡೆಸಿದ್ದರು.
ಈ ಹಿಂದೆ ಅವರು 12 ವರ್ಷ ಪಾಲಿಬೆಟ್ಟ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಅವಧಿಯಲ್ಲಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರವೂ ಲಭಿಸಿತ್ತು.
PublicNext
30/12/2020 01:19 pm