ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಸರ್ಕಾರವೇ ಸೋಂಕು ಹರಡಿದೆ ಎಂದ ಡಿಕೆ ಶಿವಕುಮಾರ್

ಬೆಂಗಳೂರು: ಇಂಗ್ಲೆಂಡ್‌ನಿಂದ ರಾಜ್ಯಕ್ಕೆ ಬಂದವರೆಲ್ಲರ ವಿಳಾಸ ಸರ್ಕಾರಕ್ಕೆ ಗೊತ್ತಿದೆ. ವಿಮಾನ ನಿಲ್ದಾಣದಲ್ಲೇ ಅವರ ಪರೀಕ್ಷೆ ನಡೆಸಲು ಇವರಿಗೆ ಇದ್ದ ಕಷ್ಟವಾದರೂ ಏನು? ಆಡಳಿತದ ವಿಚಾರದಲ್ಲಿ ಈ ಸರ್ಕಾರ ಎಷ್ಟು ವಿಫಲವಾಗಿದೆ ಎಂಬುದಕ್ಕೆ ಇದೇ ಸಾಕ್ಷಿ. ದೇಶದಲ್ಲಿ ಬ್ರಿಟನ್ ಕೊರೊನಾ ಸೋಂಕು ಹರಡಲು ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆರಂಭದಲ್ಲೇ ಬ್ರಿಟನ್ ರೂಪಾಂತರಿ ವೈರಸ್ ನಿಯಂತ್ರಿಸಿದ್ದರೆ ಇವತ್ತು ಈ ಪರಿಸ್ಥಿತಿ ಬರುತ್ತಿರಲಿಲ್ಲ. ನಮ್ಮ ರಾಜ್ಯದ ಜನರಿಂದ ಹೊರಗಿನವರಿಗೆ ಸೋಂಕು ಹರಡಿಲ್ಲ. ಬೇರೆಡೆಯಿಂದ ಬಂದವರಿಂದಲೇ ಸೋಂಕು ಹರಡಿದೆ. ಅವರನ್ನು ಮೊದಲೇ ಪರೀಕ್ಷಿಸಿ ನಿಯಂತ್ರಣ ಮಾಡಬೇಕಿತ್ತು.

'ಸಿಎಂ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಡಿಕೆಶಿ, ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಸರ್ಟಿಫಿಕೇಟ್ ಕೊಟ್ಟುಕೊಳ್ಳುವ ಸ್ಥಿತಿ ಬಂದಿದೆ ಎಂದ ಮೇಲೆ, ಅಪಾಯ ಎದುರಾಗಿದೆ ಅಥವಾ ಎಲ್ಲೋ ಏನೋ ಯಡವಟ್ಟಾಗಿದೆ ಎಂಬ ಅನುಮಾನ ಮೂಡುತ್ತದೆ' ಎಂದು ಡಿಕೆಶಿ ಹೇಳಿದರು.

Edited By : Nagaraj Tulugeri
PublicNext

PublicNext

01/01/2021 07:21 pm

Cinque Terre

92.64 K

Cinque Terre

19

ಸಂಬಂಧಿತ ಸುದ್ದಿ