ಬೆಂಗಳೂರು: ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಸಚಿವ ಡಿ.ವಿ.ಸದಾನಂದಗೌಡ ಅವರ ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಚಿತ್ರದುರ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ನಲ್ಲಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಕೇಂದ್ರ ಸಚಿವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಮುಗಿಸಿ ವಾಪಸ್ ಆಗುತ್ತಿದ್ದರು. ಈ ವೇಳೆ ಶುಗರ್ ಲೋ ಆಗಿದ್ದರಿಂದ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದರಿಂದ ಬೆಂಗಳೂರಿಗೆ ಅವರನ್ನು ಸಾಗಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
PublicNext
03/01/2021 04:41 pm