ಬೆಂಗಳೂರು: ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ 'ಕಮಲ' ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ.
ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ.ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ಟ್ವೀಟ್ ಮಾಡಿದ್ದಾರೆ.
PublicNext
03/01/2021 06:42 pm