ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕುವ ಪಕ್ಷದ ಶಾಸಕರು, ಮುಖಂಡರಿಗೆ ಬಿಜೆಪಿ ಬಿಸಿ ಮುಟ್ಟಿಸಿದೆ.
ಮುಖ್ಯಮಂತ್ರಿ ಬದಲಾವಣೆ ಕುರಿತ ಸುದ್ದಿಗಳಿಗೆ ನಗರದಲ್ಲಿ ನಡೆದ ಬಿಜೆಪಿ ವಿಶೇಷ ಸಭೆಯಲ್ಲಿ ತೆರೆ ಎಳೆದಿದೆ. ಅಷ್ಟೇ ಅಲ್ಲದೆ ಬಹಿರಂಗ ಹೇಳಿಕೆ ನೀಡುವ ಮೂಲಕ ಸರ್ಕಾರ, ಪಕ್ಷಕ್ಕೆ ಮುಜುಗರ ಸೃಷ್ಟಿಸುವ ಮುಖಂಡರು, ಕಾರ್ಯಕರ್ತರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.
ಈ ಬಗ್ಗೆ ಸ್ವತಃ ಸಿಎಂ ಯಡಿಯೂರಪ್ಪ ಅವರು ‘ಪಕ್ಷದ ಮುಖಂಡರೇ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಮುಜುಗರ ತರುತ್ತಿದ್ದಾರೆ. ನಮ್ಮವರ ಹೇಳಿಕೆಗಳನ್ನೇ ಆಧರಿಸಿ ವಿರೋಧ ಪಕ್ಷದ ಮುಖಂಡರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ಸೇರಿದಂತೆ ಪಕ್ಷದ ಪ್ರಮುಖರ ಎದುರು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿ ನಾಯಕರು ಅಂತಹ ಶಾಸಕರು, ಮುಖಂಡರಿಗೆ ಬಿಸಿ ಮುಟ್ಟಿಸಿದ್ದಾರೆ.
PublicNext
03/01/2021 07:43 pm