ಬೆಂಗಳೂರು- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಯಾರ ಜೊತೆಯೂ ವಿಲೀನವಾಗದೇ ಏಕಾಂಗಿಯಾಗಿ ಸ್ಪರ್ಧಿಸಿ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 2023ರ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದೇವೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡ್ತೀವಿ. ನಾನೇ ಎಲ್ಲ ಕಡೆ ಸಂಚಾರ ಮಾಡಿ ಪಕ್ಷ ಬಲಗೊಳಿಸುವ ಕೆಲಸ ಮಾಡ್ತೀನಿ. ಅಧಿಕಾರ ಕೊಟ್ರೆ ಏನೇನು ಮಾಡ್ತೀವಿ ಅಂತಾ ಜನರಿಗೆ ಹೇಳ್ತೀನಿ ಎಂದು ಕುಮಾರಸ್ವಾಮಿ ತಿಳಿಸಿದರು.
PublicNext
04/01/2021 03:26 pm