ಬಾಗಲಕೋಟೆ: ಸಮಸ್ಯೆ ಹೇಳಿದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಲವಂತವಾಗಿ ವೇದಿಕೆಯಿಂದ ಕೆಳಗೆ ಇಳಿಸಿದ್ದಾರೆ.
ಸಿದ್ದರಾಮಯ್ಯ ಅವರ ಕ್ಷೇತ್ರವಾದ ಬದಾಮಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯ ಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕಿತ್ತಲಿ ಗ್ರಾಮದ ಪಂಚಾಯತಿ ಸದಸ್ಯ ಸಂಗಣ್ಣ ಜಾವಣ್ಣವರ್ ಸಮಸ್ಯೆ ಹೇಳಿಕೊಂಡು ಅಸಮಾಧಾನ ಹಾಕಿದರು. ಇದರಿಂದ ಗರಂ ಆದ ಸಿದ್ದರಾಮಯ್ಯ ಅವರು ಗ್ರಾ.ಪಂ ಸಂಗಣ್ಣ ಅವರ ಬಳಿಗೆ ಬಂದು ಬಲವಂತವಾಗಿ ವೇದಿಕೆಯಿಂದ ಕೆಳಗೆ ಇಳಿಸಿದರು. ಇದರಿಂದಾಗಿ ಕೆಲ ಹೊತ್ತು ಕಾರ್ಯಕ್ರಮದಲ್ಲಿ ಗದ್ದಲ ಉಂಟಾಯಿತು.
PublicNext
04/01/2021 04:05 pm