ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಶಾಸಕರು, ಮುಖಂಡರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಹೀಗಿದ್ದರೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರ ಸಿಎಂ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಿಲ್ಲಿಸುತ್ತಿಲ್ಲ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ಸಿಎಂ ಯಡಿಯೂರಪ್ಪ ಅವರು ಪ್ರದೇಶವಾರು ಶಾಸಕರ ಜೊತೆಗೆ ಸಭೆ ನಡೆಸಿದರು. ಈ ಸಭೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಭೆಗೆ ಹಾಜರಾಗಿದ್ದಾರೆ. ಆದರೆ ಸಭೆಯಲ್ಲಿ ತಾರತಮ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
ನಮ್ಮ ಕ್ಷೇತ್ರಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ತೋರಲಾಗಿದೆ ಎಂದು ಸಿಎಂ ಎದುರೇ ಗುಡುಗಿದ್ದಾರೆ. ಅಷ್ಟೇ ಅಲ್ಲದೆ ಸಿಎಂ ನಡೆ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.
PublicNext
04/01/2021 07:38 pm