ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಎಲ್ಲದಕ್ಕೂ ನಿಮ್ಮ ಮಗನೇ ಅಂತಿಮವಾದ್ರೆ ಪಕ್ಷಕ್ಕಾಗಿ ದುಡಿದವರ ಗತಿ ಏನು?'

ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ವಿರುದ್ಧ ಸಿಡಿದೆದ್ದಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ಇಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಮುಂಬೈ, ಮಧ್ಯ ಕರ್ನಾಟಕ ಭಾಗದ ಶಾಸಕರ ಜೊತೆ ಸಭೆ ನಡೆಸಿದರು. ಈ ವೇಳೆ ಯತ್ನಾಳ್, ''ನಾನು ಶಾಸಕ, ನಿಮ್ಮ ಬಳಿ ಮಾತನಾಡಬೇಕು. ನಾನು ನಿಮ್ಮ ಮಗನ ಬಳಿ ಯಾಕೆ ಮಾತಾಡಬೇಕು? ಎಲ್ಲದಕ್ಕೂ ಮಗನ ಮಾತೇ ಅಂತಿಮ ಮಾಡುವುದಾದರೆ, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಗತಿ ಏನು'' ಎಂದು ಪ್ರಶ್ನಿಸಿ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಪಕ್ಷದಲ್ಲಿ ನೀವು ಹಿರಿಯರಾಗಿ ಎಲ್ಲದಕ್ಕೂ ತಲೆದೂಗಿದರೆ ಹೇಗೆ? ಮಗನ ಹಸ್ತಕ್ಷೇಪ ಕಡಿಮೆ ಮಾಡಬೇಕು ಎಂದು ಯತ್ನಾಳ್ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಗುಡುಗಿದರು. ಈ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ''ನಿಮ್ಮ ಸಮಸ್ಯೆಗಳನ್ನು ನೇರವಾಗಿ ನನ್ನ ಬಳಿ ಮಾತಾಡಿ. ಕಾವೇರಿ, ಕೃಷ್ಣಾ ಪ್ರವೇಶಕ್ಕೆ ನಿಮಗೆ ಮುಕ್ತ ಅವಕಾಶ ಇದೆ. ವಿಜಯಪುರದಲ್ಲೊಂದು, ಬೆಂಗಳೂರಲ್ಲೊಂದು ಹೇಳಿಕೆ ನೀಡಿ ಪಕ್ಷಕ್ಕೆ, ಸರ್ಕಾರಕ್ಕೆ ಡ್ಯಾಮೇಜ್ ಮಾಡಬೇಡ ಎಂದು ಎಚ್ಚರಿಕೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಯತ್ನಾಳ್ ಅವರಿಗೆ ಧ್ವನಿಗೂಡಿಸಿದ ಶಾಸಕ ಉಮೇಶ್​ ಕತ್ತಿ, ''ಯಾವುದೇ ಕ್ಷೇತ್ರದಲ್ಲಾಗಲಿ ಅಥವಾ ಬೆಂಗಳೂರಿನಲ್ಲಾಗಲಿ ಮಕ್ಕಳನ್ನು ನಾವು ಕಂಟ್ರೋಲ್​ನಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಸಮಸ್ಯೆಯಾಗುತ್ತದೆ'' ಎಂದು ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ಟಿದ್ದಾರೆ ಎನ್ನಲಾಗಿದೆ.

Edited By : Vijay Kumar
PublicNext

PublicNext

04/01/2021 08:20 pm

Cinque Terre

71.17 K

Cinque Terre

6

ಸಂಬಂಧಿತ ಸುದ್ದಿ