ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡ ಧ್ವಜ ಇಳಿಸದಿದ್ದರೆ ಭಗವಾ ಧ್ವಜ ಹಾರಿಸುತ್ತೇವೆ: ಎಂಈಎಸ್ ಕ್ಯಾತೆ

ಬೆಳಗಾವಿಯ ಮಹಾನಗರ ಪಾಲಿಕೆ ಕಛೇರಿ ಎದುರು ಹಾರಿಸಿರುವ ಕನ್ನಡ ಬಾವುಟವನ್ನು ಡಿಸಂಬರ್ 31 ರೊಳಗೆ ತೆರವುಗೊಳಿಸಬೇಕು ಎಂದು ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯು (MES) ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೇ ಮತ್ತೊಂದು ಎಚ್ಚರಿಕೆಯನ್ನೂ ನೀಡಿದ್ದು, “ಹಾರಿಸಿರುವ ಕನ್ನಡ ಧ್ವಜವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರದ ಗಲ್ಲಿ ಗಲ್ಲಿಗಳಲ್ಲಿ ಭಗವಾಧ್ವಜಗಳು ಹಾರಾಡಲಿವೆ. ಜೊತೆಗೆ ಗಡಿ ವಿವಾದಕ್ಕೆ ಸಂಬಂಧಿಸಿದ ಘೋಷಣೆಗಳು ಮೊಳಗಲಿವೆ” ಎಂದು ಜಿಲ್ಲಾಡಳಿತಕ್ಕೆ ಸವಾಲು ಹಾಕಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಸಾವನ್ನಪ್ಪಿದ್ದ MES ಕಾರ್ಯಕರ್ತರ ನೆನಪಿಗಾಗಿ ಜನವರಿ 17 ರಂದು ಹುತಾತ್ಮ ದಿನಾಚರಣೆ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲು ಮರಾಠಾ ಮಂದಿರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ವಿಶ್ವಾಸಾರ್ಹ ಮೂಲಗಳಿಂದ ವರದಿಯಾಗಿದೆ.

Edited By : Nagaraj Tulugeri
PublicNext

PublicNext

04/01/2021 10:53 pm

Cinque Terre

76.39 K

Cinque Terre

35

ಸಂಬಂಧಿತ ಸುದ್ದಿ