ಬೆಳಗಾವಿ: ಗೋಕಾಕ್ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡಲು ನಮ್ಮದೇನು ತಕರಾರಿಲ್ಲ. ಆದಷ್ಟು ಬೇಗ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ್ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡಲು ನಮ್ಮ ಸರ್ಕಾರ ಇದ್ದಾಗಲೂ ಹೇಳಿದ್ದೆವು.
ಸದನದಲ್ಲೂ ಸಾಕಷ್ಟು ಬಾರಿ ಜಿಲ್ಲೆ ಮಾಡಬೇಕೆಂದು ಹೇಳಿದ್ದೇವೆ. ಗೋಕಾಕ್ ಜಿಲ್ಲೆ ಆದ್ರೆ ಒಳ್ಳೆಯದು. ಆ ಶ್ರೇಯಸ್ಸು ರಮೇಶ್ ಅವರಿಗೆ ಸಲ್ಲುತ್ತದೆ ಎಂದರು. ಕೋರ್ಟ್ಗೂ ಬೆಳಗಾವಿ ಜಿಲ್ಲಾ ವಿಭಜನೆಗೆ ಯಾವುದೇ ರೀತಿಯ ಸಂಬಂಧವಿಲ್ಲ. ಬಹಳಷ್ಟು ದೊಡ್ಡದಾಗಿರುವ ಬೆಳಗಾವಿಯನ್ನು ವಿಭಜನೆ ಮಾಡಲೇಬೇಕು. ಇಲ್ಲವಾದ್ರೆ ಅಭಿವೃದ್ಧಿ ಮಾಡಲು ಕಷ್ಟವಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
PublicNext
05/01/2021 02:46 pm