ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯತ್ನಾಳರು ತಮ್ಮ ಸ್ವಾರ್ಥಕ್ಕಾಗಿ ಏನೇನೋ ಟೀಕೆ ಮಾಡ್ತಿದ್ದಾರೆ: ಸಿಡಿದೆದ್ದ ರೇಣುಕಾ

ಬೆಂಗಳೂರು: ನನ್ನ ಬಳಿ ಬನ್ನಿ ಎಂದು ಸಿಎಂ ಪುತ್ರ ವಿಜಯೇಂದ್ರ ಯಾರನ್ನೂ ಕರೆದಿರಲಿಲ್ಲ. ಇವರ ಸ್ವಾರ್ಥಕ್ಕಾಗಿ ಇವರೇ ಹೋಗಿ ಈಗ ಏನೇನೋ ಆರೋಪ ಮಾಡ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ನಿನ್ನೆ ನಡೆದ ಸಭೆಯಲ್ಲಿ ಎಲ್ಲಾ ಶಾಸಕರಿಗೂ ವಸ್ತುಸ್ಥಿತಿಯನ್ನು ಸಿಎಂ ಮನವರಿಕೆ ಮಾಡಿಕೊಟ್ಟಿದ್ದಾರೆ. ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಬಜೆಟ್​​ನಲ್ಲಿ ಸಾಧ್ಯವಾಗುವುದನ್ನು ಮಾಡಿಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ಅದಕ್ಕೆ ಶಾಸಕರು ತೃಪ್ತರಾಗಿದ್ದು, ಎರಡು, ಮೂರು ತಿಂಗಳಿಗೊಮ್ಮೆ ಇಂತಹ ಸಭೆ ನಡೆಸಲು ಸಲಹೆ ಕೊಟ್ಟರು. ಈ ಸಲಹೆಯನ್ನು ಸಿಎಂ ಮತ್ತು ರಾಜ್ಯಾಧ್ಯಕ್ಷರು ಒಪ್ಪಿದ್ದಾರೆ ಎಂದರು.

ನಾನು ಕೇವಲ ಯಡಿಯೂರಪ್ಪನವರ ಪರವಾಗಿ ಮಾತನಾಡುವವನಲ್ಲ. ಸಂಘಟನೆ ಮತ್ತು ಪಕ್ಷ ತಾಯಿಗೆ ಸಮಾನ. ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದಿರುವ ಯಡಿಯೂರಪ್ಪನವರು ತಂದೆಯ ಸಮಾನ. ಇಬ್ಬರನ್ನೂ ಗೌರವಿಸಬೇಕು ಇದು ನಮ್ಮ ಕರ್ತವ್ಯವೂ ಆಗಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

05/01/2021 03:20 pm

Cinque Terre

47.89 K

Cinque Terre

3