ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಈ ಜನ್ಮದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದರು.
ಸಿದ್ದರಾಮಯ್ಯ ಬದಾಮಿಯಲ್ಲಿ ಹೇಳಿಕೆ ನೀಡಿರುವುದನ್ನು ನಾನು ಕೇಳಿದ್ದೇನೆ. ಭಾರತೀಯ ಜನತಾ ಪಾರ್ಟಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಶೇ. 60ರಷ್ಟು ಗೆದ್ದಿದೆ. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಗೆಲ್ಲುವ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಂಘಟನೆಯ ಶಕ್ತಿಯ ಮೇಲೆ ಜನರ ಆಶೀರ್ವಾದದಿಂದ ಪಕ್ಷವನ್ನು ಅಧಿಕಾರಕ್ಕೆ ತರುವ ದಿಕ್ಕಿನಲ್ಲಿ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.
PublicNext
05/01/2021 04:53 pm