ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರಿಬ್ಬರೂ ಕರ್ನಾಟಕದ ಬಫೂನ್ಗಳು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಧರ್ಮೇಗೌಡ ಅವರದ್ದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಸಲಿಗೆ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಏಕೆ ಮಾತನಾಡುತ್ತಾರೆ?. ಜನರೇ ಇವರನ್ನು ಬಫೂನ್ ತರ ನೋಡುತ್ತಿರುವಾಗ ಇವರು ಯಾರಿಗಾಗಿ ಮಾತನಾಡುತ್ತಿದ್ದಾರೆ? ಅವರ ಮಾತಿಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಯಾವ ಹೋರಾಟ ಮಾಡಿದ್ದಾರೆ? ಜೆಡಿಎಸ್ ಪಕ್ಷದಲ್ಲಿದ್ದ ಅವರನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪಕ್ಷದಿಂದಲೇ ಹೊರ ಹಾಕಿದ್ದರು. ನಂತರ ಅವರು ಕಾಂಗ್ರೆಸ್ಗೆ ಬಂದರು. ಅಲ್ಲೂ ಯಾವುದೇ ಹೋರಾಟ ಮಾಡಿಲ್ಲ. ನಾವು ಹೋರಾಟ ಮಾಡಿದ್ವಿ, ಅವರು ಮುಖ್ಯಮಂತ್ರಿಯಾದರು. ಬೇಕಿದ್ದರೆ ನಾನೇ ಹೋರಾಟದ ಕುರಿತು ಸಿದ್ದರಾಮಯ್ಯ ಅವರಿಗೆ ಪಾಠ ಮಾಡಲು ಸಿದ್ಧನಿದ್ದೇನೆ ಎಂದು ಟಾಂಗ್ ಕೊಟ್ಟಿದ್ದಾರೆ.
PublicNext
06/01/2021 02:11 pm