ಬೆಂಗಳೂರು: ಎರಡು ದಿನ ನಡೆದ ಶಾಸಕರ ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ಸಿಎಂ ಯಡಿಯೂರಪ್ಪ ಮುಂದೆ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದ ಬಗ್ಗೆ ಎಲ್ಲರೂ ಸಭೆಯಲ್ಲಿ ಬೆಂಬಲ ಕೊಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು ‘ಯಾವುದೇ ವಿಷಯವನ್ನು ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಯಾರೂ ಕೂಡಾ ಪಕ್ಷ, ಸರ್ಕಾರದ ಬಗ್ಗೆ ಮಾತನಾಡಬಾರದು. ಹಾಗೇನಾದರೂ ಬಹಿರಂಗವಾಗಿ ಮಾತನಾಡಿದರೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಕೋರ್ ಕಮಿಟಿಯಲ್ಲಿ ತೀರ್ಮಾನ ಆಗಿದೆ’ ಎಂದರು.
PublicNext
06/01/2021 05:45 pm