ಬಂಟ್ವಾಳ: ಯಾರೆಲ್ಲ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ. ಅವರನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕೆಲಸ ಆಗ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಹಳಷ್ಟು ಜನ ಪಕ್ಷಕ್ಕೆ ಬರಲು ಸಜ್ಜಾಗಿದ್ದಾರೆ. ಯಾವುದೇ ಕಂಡೀಶನ್ ಇಲ್ಲದೆ ಬರುವವರನ್ನು ಸ್ವಾಗತ ಮಾಡುತ್ತೇನೆ. ಇಲ್ಲಿ ಆ ಬಗ್ಗೆ ಹೆಚ್ಚು ಮಾತಾಡಲ್ಲ. ಎಲ್ಲ ಆಗ್ಲಿ, ಆಮೇಲೆ ಮಾತಾಡ್ತೀನಿ ಎಂದರು.
ಇನ್ನು ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರೊಂದಿಗೆ ಕಾಂಗ್ರೆಸ್ ಶಾಸಕರು ಮಾತುಕತೆ ನಡೆಸುತ್ತಿದ್ದಾರೆ.
ನಮ್ಮದೊಂದು ಸಿದ್ಧಾಂತವಿದೆ, ಅವರಿಗೊಂದು ಸಿದ್ಧಾಂತವಿದೆ. ಅವರ ಸಿದ್ಧಾಂತ ಅವರಿಗೆ, ನಮ್ಮ ಸಿದ್ಧಾಂತ ನಮಗೆ ಎಂದ ಡಿ.ಕೆ.ಶಿ., ಜೆಡಿಎಸ್ ಸಿದ್ಧಾಂತದ ಬಗ್ಗೆ ನಾನು ಕಾಮೆಂಟ್ ಮಾಡಲ್ಲ. ಅವರ ವಿಚಾರ ಅವ್ರು ಹೇಳಲಿ. ನಮ್ಮ ವಿಚಾರ ನಾವು ಹೇಳ್ತೀವಿ ಎಂದರು.
PublicNext
06/01/2021 09:42 pm