ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವ ಲಕ್ಷ್ಮಿ ರತನ್ ಶುಕ್ಲಾ ಮಂಗಳವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಾರಿಗೆ ಸಚಿವ ಸುವೇಂದು ಅಧಿಕಾರಿ ಟಿಎಂಸಿ ಪಕ್ಷ ತೋರೆದ ಹದಿನೈದು ದಿನಗಳ ಬಳಿಕ ಶುಕ್ಲಾ ರಾಜೀನಾಮೆ ನೀಡಿರುವುದು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ತಕ್ಕಮಟ್ಟಿಗೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.
ಲಕ್ಷ್ಮಿ ರತನ್ ಶುಕ್ಲಾ ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗದೀಪ್ ಧನ್‌ಕರ್ ಅವರಿಗೆ ಕಳುಹಿಸಿದ್ದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲಹೆ ಮೇರೆಗೆ ರಾಜ್ಯಪಾಲ ಜಗದೀಪ್ ಧನ್‌ಕರ್ ಅವರು ಸಚಿವ ಲಕ್ಷ್ಮಿ ರತನ್ ಶುಕ್ಲಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ಶುಕ್ಲಾ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕ್ರೀಡೆಗಾಗಿ ಹೆಚ್ಚಿನ ಸಮಯ ನೀಡಲು ಬಯಸಿದ್ದು, ಶಾಸಕರಾಗಿ ಮುಂದುವರಿಯಲಿದ್ದಾರೆ. ಇದನ್ನು ನಕಾರಾತ್ಮಕ ರೀತಿಯಲ್ಲಿ ತೆಗೆದುಕೊಳ್ಳುವುದು ಬೇಡ” ಎಂದು ಹೇಳಿದ್ದಾರೆ.
PublicNext
06/01/2021 10:12 pm