ವಾಷಿಂಗ್ಟನ್- ಅಮೆರಿಕದ 46 ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಜನವರಿ 20ರಂದು ಅಧ್ಯಕ್ಷ ಸ್ಥಾನಕ್ಕೆ ಜೋ ಬೈಡನ್ ಪದಗ್ರಹಣ ಸ್ವೀಕರಿಸಲಿದ್ದಾರೆ. ಅಮೆರಿಕದ ಕಾಂಗ್ರೆಸ್ ಜಂಟಿ ಅಧಿವೇಶನದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಜೋ ಬೈಡೆನ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅಂತಿಮಗೊಳಿಸಲಾಗಿದೆ ಎಂದು ಉಪಾಧ್ಯಕ್ಷ ಮೈಕ್ ಪೆನ್ಸ್ ಘೋಷಿಸಿದ್ದಾರೆ.
ಇತ್ತೀಚಿಗೆ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಜೋ ಬೈಡನ್ ಅವರು 306 ಎಲೆಕ್ಟ್ರೋರಲ್ ಮತಗಳನ್ನು ಪಡೆದು ಬಹುಮತ ಸಾಧಿಸಿದ್ದರು. ಇವರ ಎದುರಾಳಿ ಅಭ್ಯರ್ಥಿಯಾಗಿದ್ದ ಡೊನಾಲ್ಡ್ ಟ್ರಂಪ್ ಅವರು 232 ಎಲೆಕ್ಟ್ರೋರಲ್ ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡಿದ್ದರು.
ಇನ್ನು ಅಮೆರಿಕ ಉಪಾಧ್ಯಕ್ಷ ಸ್ಥಾನಕ್ಕೆ ಉಡುಪಿ ಮೂಲದ ಕನ್ನಡತಿ ಕಮಲಾ ಹ್ಯಾರಿಸ್ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.
PublicNext
07/01/2021 02:45 pm