ಬಾಗಲಕೋಟೆ: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೇ ಅಲ್ಲ ಬಹಳ ಜನ ಕ್ಯೂನಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇರುತ್ತದೆ. ಕೆಲವರು ಬಹಿರಂಗವಾಗಿ ಹೇಳಿಕೊಳ್ಳುತ್ತಾರೆ ಇನ್ನೂ ಕೆಲವರು ಹೇಳಿಕೊಳ್ಳುವುದಿಲ್ಲ. ಅದೇನು ದೊಡ್ಡ ಪ್ರಶ್ನೆಯಲ್ಲ. ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಸಿದ್ದರಾಮಯ್ಯ, ಡಿಕೆಶಿ ಇಬ್ಬರಿದ್ದಾರೆ. ಅವರ ಹಿಂದೆ ಬಹಳ ಜನ ಇದ್ದಾರೆ. ನಾವು ಅವರದ್ದು ಆದ ಮೇಲೆ ಎಂದು ಈಗಾಗಲೇ ಹೇಳಿದ್ದೀವಿ. 2023ರಲ್ಲಿ ನಮಗೆ 113 ಸ್ಥಾನ ಬರಬೇಕು. ಶಾಸಕರನ್ನು ಆಯ್ಕೆ ಮಾಡಬೇಕು. ನಂತರ ಸಿಎಂ ಸ್ಥಾನ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.
PublicNext
07/01/2021 07:11 pm